ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್

Prasthutha|

ಬೆಂಗಳೂರು: ಲಂಚ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಕೆ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ.

- Advertisement -


ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ನ ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಮೂರ್ತಿ ಕೆ. ನಟರಾಜನ್‌ ಅವರಿದ್ದ ನ್ಯಾಯಪೀಠ ಮಂಗಳವಾರ ನಡೆಸಿ, ಈ ತೀರ್ಪು ನೀಡಿದೆ.

- Advertisement -

ಐದು ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಸಲ್ಲಿಸಬೇಕು, ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿ ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿಗಳಿಗೆ ನಿರ್ದೇಶನ ನೀಡಿ ಮಾರ್ಚ್ 17ಕ್ಕೆ ವಿಚಾರಣೆ ಮುಂದೂಡಿದೆ.



Join Whatsapp