ಬೆಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ರಾಜ್ಯದ ಮಂಗಳೂರು, ಚಾಮರಾಜನಗರ, ಮೈಸೂರು, ಯಾದಗಿರಿ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆಗಳಲ್ಲಿ ಪುತ್ತೂರು ಮೂಲ್ಕಿ-ಮೂಡುಬಿದಿರೆ, ಹಾಗೂ ಉಳ್ಳಾಲದಲ್ಲಿ ಮಹಿಳಾ ದಿನಾಚರಣೆಯ ಪ್ರಯುಕ್ತ ಆಹಾರ ಕಿಟ್ , ಹೊಲಿಗೆ ಯಂತ್ರ ವಿತರಣೆ, ಬಡ ರೋಗಿಗಳಿಗೆ ಹಣ್ಣ ಹಂಪಲು ವಿತರಣೆ, ಸ್ನೇಹ ಸಮ್ಮಿಲನ, ಸಾಧಕರಿಗೆ ಸನ್ಮಾನ, ವೃದ್ಧಾಶ್ರಮಕ್ಕೆ ಭೇಟಿ, ವಿಕಲ ಚೇತನ ಮಕ್ಕಳ ಭೇಟಿ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಸಿ ಮಹಿಳೆಯರಿಗೆ ಉತ್ತಮ ಸಂದೇಶವನ್ನು ನೀಡುವಂತಹ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ, ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ, ಸೇರಿದಂತೆ ಆಯಾಯ ಜಿಲ್ಲೆಯ ಪಧಾದಿಕಾರಿಗಳು ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.