ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಝಮೀರ್ ಅಹ್ಮದ್ ಖಾನ್ ಅವರುಗುರುವಾರ ದೆಹಲಿ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಹಾಜರಾಗಿದ್ದಾರೆ.
2021ರಲ್ಲಿ ಝಮೀರ್ ವಿರುದ್ಧ ತನಿಖೆ ಕೈಗೊಂಡಿದ್ದ ಜಾರಿ ನಿರ್ದೇಶನಾಲಯ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಸಮೀಪದ ಅವರ ಭವ್ಯವಾದ ಬಂಗಲೆಯ ಮೌಲ್ಯ ಮಾಪನ ನಡೆಸಿತ್ತು.
ಬೆಂಗಳೂರು ಕಂಟೋನ್ಮೆಂಟ್ ನಲ್ಲಿರುವ ಝಮೀರ್ ಅಹ್ಮದ್ ಖಾನ್ ನಿವಾಸ, ಸಿಲ್ವರ್ ಓಕ್ ಅಪಾರ್ಟ್ ಮೆಂಟ್ ನಲ್ಲಿರುವ ಫ್ಲ್ಯಾಟ್, ಸದಾಶಿವನಗರದ ಅತಿಥಿಗೃಹ, ಬನಶಂಕರಿಯಲ್ಲಿರುವ ಜಿಕೆ ಅಸೋಸಿಯೇಟ್ಸ್ ಕಚೇರಿ ಮತ್ತು ಕಲಾಸಿಪಾಳ್ಯದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಸೇರಿದಂತೆ ಐದು ಸ್ಥಳಗಳಲ್ಲಿ ಎಸಿಬಿ ದಾಳಿ ನಡೆಸಲಾಗಿತ್ತು.