ಧಾರವಾಡ: ರಸ್ತೆ ಬದಿಯ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗು ಮೃತಪಟ್ಟಿರುವ ಘಟನೆ ನಗರದ ಹೊರವಲಯದಲ್ಲಿರುವ ಬೇಲೂರು ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ನಾಗರಾಳದ ನಿವಾಸಿ ಸಂಗವ್ವ(20) ಮತ್ತು ಮಗು ಮಾಯಕ್ಕ(1) ಮೃತಪಟ್ಟವರು.
ಪತಿ ಜಕ್ಕಪ್ಪ ಹೆಗ್ಗಣ್ಣವರ್ ಜೊತೆ ಬೈಕ್ನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.