ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ: ರಂಗಮಂದಿರದಲ್ಲಿದ್ದ ಫೋಟೊ ತೆರವುಗೊಳಿಸಿ ಆಕ್ರೋಶ

Prasthutha|

ಮಂಡ್ಯ: ಬಿಜೆಪಿಗೆ ನನ್ನ ಬೆಂಬಲ ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ಘೋಷಣೆ ಮಾಡಿದ ಬೆನ್ನಲ್ಲೇ ರಂಗಮಂದಿರದಲ್ಲಿದ್ದ ಫೋಟೊ ತೆರವುಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬಿದರಕೆರೆ ಗ್ರಾಮದಲ್ಲಿ ನಡೆದಿದೆ.

- Advertisement -


ನಾಗಮಂಗಲ ತಾಲೂಕಿನ ಬಿದರಕೆರೆ ಗ್ರಾಮದಲ್ಲಿರುವ ಲಂಕೇಶ್ ರಂಗಮಂದಿರದಲ್ಲಿ ಹಾಕಿದ್ದ ಅವರ ಫೋಟೊವನ್ನು ಗ್ರಾಮಸ್ಥರು ತೆರವು ಮಾಡಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಜಯಗಳಿಸಿದ್ದರು. ಆದರೆ ಶುಕ್ರವಾರ ಅಧಿಕೃತವಾಗಿ ಬಿಜೆಪಿಗೆ ಬೆಂಬಲ ಎಂದು ಘೋಷಣೆ ಮಾಡಿದ್ದರು. ಈ ಬಗ್ಗೆ ಬಿದರಕೆರೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



Join Whatsapp