ಬೆಂಗಳೂರು: ಮಾರ್ಚ್ 13ರಿಂದ ಆರಂಭವಾಗಬೇಕಿದ್ದ 5, 8 ತರಗತಿಗಳ ಪಬ್ಲಿಕ್ ಪರೀಕ್ಷೆಗಳನ್ನು ಕರ್ನಾಟಕ ಹೈಕೋರ್ಟ್ ನ ಆದೇಶದಂತೆ ಮುಂದೂಡಲಾಗಿದೆ ಎಂದು ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ನ್ಯಾಯಾಲಯ ಅನುಮತಿಸಿದಲ್ಲಿ ಮೌಲ್ಯಾಂಕನವನ್ನು (ಪರೀಕ್ಷೆಯನ್ನು) ನಡೆಸುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಈ ಮೌಲ್ಯಾಂಕನವು ವಿದ್ಯಾರ್ಥಿಗಳ ಕಲಿಕಾ ಮಟ್ಟ, ಕಲಿಕಾ ನ್ಯೂನ್ಯತೆಗಳು ಹಾಗೂ ಯಾವ ವಿಷಯದಲ್ಲಿ ಹಿನ್ನಡೆ ಉಂಟಾಗಿದೆ ಎಂಬುವುದನ್ನು ತಿಳಿಯುವುದಾಗಿದೆ. ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವುದು ಈ ಮೌಲ್ಯಾಂಕನದ ಉದ್ದೇಶವಲ್ಲ ಎಂಬುವುದು ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ.