ಸರಕಾರದ ಅವೈಜ್ಞಾನಿಕ ಶಿಕ್ಷಣ ನೀತಿ| ಶಿಕ್ಷಣ ಸಚಿವರ ರಾಜೀನಾಮೆಗೆ ಸಿಪಿಐ ಒತ್ತಾಯ

Prasthutha|

ಮಂಗಳೂರು: ಸರಕಾರದ ಅವೈಜ್ಞಾನಿಕ ಶಿಕ್ಷಣ ನೀತಿಯನ್ನು ಭಾರತ ಕಮ್ಯುನಿಸ್ಟ್ ಪಕ್ಷ(ಸಿಪಿಐ) ಬಲವಾಗಿ ಖಂಡಿಸಿದ್ದು,ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯಿಸಿದೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಭಾರತ ಕಮ್ಯುನಿಸ್ಟ್ ಪಕ್ಷ(ಸಿಪಿಐ)ದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಮಿತಿ ಕಾರ್ಯದರ್ಶಿ ಬಿ ಶೇಖರ್, ಕೇಂದ್ರ ಹಾಗೂ ರಾಜ್ಯ ಸರಕಾರಗಳು ದೇಶದ ಶಿಕ್ಷಣ ನೀತಿಗಳನ್ನು ಯದ್ವಾತದ್ವಾ ಬದಲಾಯಿಸಲು ಹೊರಟ ಕಾರಣದಿಂದಾಗಿ ಶಿಕ್ಷಣ ಕ್ಷೇತ್ರವು ಅಲ್ಲೋಲ ಕಲ್ಲೋಲ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಕೇಂದ್ರ ಶಿಕ್ಷಣ ನೀತಿಯನ್ನು ಅನುಸರಿಸುತ್ತಿರುವ ರಾಜ್ಯ ಸರಕಾರ ಇನ್ನೊಂದು ಹೆಜ್ಜೆ ಮುಂದೆ ಹೋಗಿ 5ನೇ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಎಂದು ಘೋಷಿಸಿ ವಿದ್ಯಾರ್ಥಿಗಳನ್ನು ಗೊಂದಲಕ್ಕೀಡುಮಾಡಿತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಕಾರದ ಈ ಅನಗತ್ಯ ಹಾಗೂ ಅವೈಜ್ಞಾನಿಕ ಕ್ರಮವನ್ನು ಉಚ್ಚ ನ್ಯಾಯಾಲಯವು ರದ್ದುಗೊಳಿಸಿರುವುದು ಸ್ವಾಗತಾರ್ಹ. ಶಿಕ್ಷಣ ಕ್ಷೇತ್ರಕ್ಕೆ ರಾಜಕೀಯವನ್ನು ತುರುಕಿ ಆ ಮೂಲಕ ಸಂಘಪರಿವಾರದ ಅಜೆಂಡಾಗಳನ್ನು ಜಾರಿಗೊಳಿಸಲು ಪ್ರಯತ್ನಿಸುತ್ತಿರುವ ರಾಜ್ಯ ಸರಕಾರದ ನೀತಿಗಳನ್ನು ಖಂಡಿಸಿದ ಅವರು,  ಇದಕ್ಕೆ ಕಾರಣಕರ್ತರಾದ ಶಿಕ್ಷಣ ಸಚಿವರು ಕೂಡಲೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.  



Join Whatsapp