ಅಂತ್ಯಕ್ರಿಯೆ ಸ್ಥಳದಲ್ಲೇ ಧ್ರುವ ನಾರಾಯಣ ಪುತ್ರ ದರ್ಶನ್‌ಗೆ ಟಿಕೆಟ್ ನೀಡಲು ಒತ್ತಾಯ

Prasthutha|

ಚಾಮರಾಜನಗರ: ಧ್ರುವನಾರಾಯಣ ಅವರ ಅಂತ್ಯಕ್ರಿಯೆ ಸ್ಥಳದಲ್ಲಿ ಅಭಿಮಾನಿಗಳು ಮುಂದಿನ ಚುನಾವಣೆಯಲ್ಲಿ ಅವರ ಪುತ್ರ ದರ್ಶನ್ ಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ ಘಟನೆ ನಡೆಯಿತು.

- Advertisement -

ಅಂತ್ಯಕ್ರಿಯೆ ನಡೆಯಲಿರುವ ಜಮೀನಿನ ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜಿ.ಪರಮೇಶ್ವರ್ ಸೇರಿದಂತೆ ಎಲ್ಲ ಮುಖಂಡರು ಕುಳಿತಿದ್ದರು. ಈ ಸಂದರ್ಭದಲ್ಲಿ ಧ್ರುವನಾರಾಯಣ ಅವರ ಬೆಂಬಲಿಗರು, ಮುಂದಿನ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ದರ್ಶನ್ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.

ಅಭಿಮಾನಿಗಳು ಜೋರಾಗಿ ಗದ್ದಲ ಎಬ್ಬಿಸಿದಾಗ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜಿ.ಪರಮೇಶ್ವರ್ ಅವರು ಕೈಮುಗಿದು, ಸಮ್ಮನಿರುವಂತೆ ಮನವಿ ಮಾಡಿದರು. ಆದರೂ ಅಭಿಮಾನಿಗಳು ಘೋಷಣೆಗಳನ್ನು ನಿಲ್ಲಿಸಲಿಲ್ಲ.

- Advertisement -

‘ನಾವು ಇದ್ದೇವೆ. ಮುಂದೆ ನಿರ್ಧಾರ ಕೈಗೊಳ್ಳುತ್ತೇವೆ ಈಗ ನೀವು ಸುಮ್ಮನಿರಿ’ ಎಂದು‌ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು.



Join Whatsapp