ಲಂಚ ಪ್ರಕರಣ: ಮಾಡಾಳು ಪುತ್ರ ಸೇರಿ ಐವರು ಪೊಲೀಸ್ ಕಸ್ಟಡಿಗೆ

Prasthutha|

ಬೆಂಗಳೂರು: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಹಾಗೂ ಇತರ ಆರೋಪಿಗಳನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದು, ಇದೀಗ ಪೊಲೀಸ್ ಕಸ್ಟಡಿ ಅವಧಿಯನ್ನು ಮಾ.16 ವರೆಗೆ ವಿಸ್ತರಣೆ ಮಾಡಲಾಗಿದೆ.

- Advertisement -


ಪ್ರಶಾಂತ್, ಸುರೇಂದ್ರನ್, ಸಿದ್ದೇಶ್, ನಿಕೋಲಸ್, ಗಂಗಾಧರ್ ಪ್ರಕರಣದ ಆರೋಪಿಗಳಾಗಿದ್ದಾರೆ.

ಪ್ರಶಾಂತ್ ಮಾಡಾಳು ಸೇರಿದಂತೆ ಐವರು ಆರೋಪಿಗಳ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಐವರು ಆರೋಪಿಗಳನ್ನು ಹಾಜರುಪಡಿಸಲಾಗಿತ್ತು, ಇದೀಗ ಪೊಲೀಸ್ ಕಸ್ಟಡಿ ಅವಧಿಯನ್ನು ಮಾ.16 ವರೆಗೆ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.



Join Whatsapp