ಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ನಗರದ ಅಳಪೆ ಬಳಿ ನಡೆದಿದೆ.
ಬಂಟ್ವಾಳ ತಾಲೂಕಿನ ಆಲಡ್ಕ ಬಂಗ್ಲೆಗುಡ್ಡೆ ಹೌಸ್ ನಿವಾಸಿ ಅಬ್ದುಲ್ ಸಾದಿಕ್ (35) ಹಾಗೂ ಬೆಳ್ತಂಗಡಿ ಕಕ್ಕಿಂಜೆ ಗಾಂಧಿನಗರ ಮನೆ ನಿವಾಸಿ ನವಾಜ್ (24) ಬಂಧಿತ ಆರೋಪಿಗಳು.
ಆರೋಪಿಗಳಿಂದ 3.90 ಲಕ್ಷ ರೂ. ಮೌಲ್ಯದ 13 ಕೆಜಿ ಗಾಂಜಾ ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರು ಆಂಧ್ರಪ್ರದೇಶದಿಂದ ಬೆಂಗಳೂರು ಮೂಲಕವಾಗಿ ಮಂಗಳೂರಿಗೆ ಗಾಂಜಾ ಸಾಗಿಸುತ್ತಿದ್ದರು ಎನ್ನಲಾಗಿದೆ.
ಇದರಲ್ಲಿ ಸಾದಿಕ್ ಮೇಲೆ ಕಳೆದ ವರ್ಷ ಮೈಸೂರಿನ ಲಷ್ಕರ್ ಮೊಹಲ್ಲಾ ಠಾಣೆಯಲ್ಲಿ ಗಾಂಜಾ ಸಾಗಾಟದ ಕೇಸ್ ದಾಖಲಾಗಿವೆ.