ಫತೇಪುರ: ಉತ್ತರ ಪ್ರದೇಶದ ಫತೇಪುರ ಜಿಲ್ಲೆಯ ಹುಸೈಂಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಬಾಲಕಿಯರ ಮೇಲೆ ಆರು ಮಂದಿಯ ಗುಂಪು ಸಾಮೂಹಿಕ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆ ನಡೆದಿದೆ.
ಗ್ರಾಮದ ಜಾತ್ರೆಯಿಂದ ವಾಪಸ್ಸಾಗುತ್ತಿದ್ದ ವೇಳೆ ಬಾಲಕಿಯರ ಮೇಲೆ ಈ ಕೃತ್ಯ ನಡೆದಿದೆ. ಬಾಲಕಿಯರ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ಪರೀಕ್ಷೆಗಳಿಂದ ಖಚಿತವಾಗಿದೆ ಎಂದು ಪೊಲೀಸರು ಅಧಿಕಾರಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎಲ್ಲಾ ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಫತೇಪುರ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376 ಡಿ, 342, 323, 504, 506 ಮತ್ತು ಪೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.