ಕೇರಳ: ಬಿಜೆಪಿ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

Prasthutha|

ಪಾಲಕ್ಕಾಡ್: ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ.

- Advertisement -


ಬಿಜೆಪಿ ಕಾರ್ಯಕರ್ತರಾದ ವಿಷ್ಣು ಮತ್ತು ದಿನೇಶ್ ಮೇಲೆ ಹಲ್ಲೆ ನಡೆದಿದೆ. ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಈ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಲತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.



Join Whatsapp