ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬೇಕಾಗಿದ್ದಾರೆ. ಅವರನ್ನು ಹುಡುಕಿಕೊಟ್ಟರೆ 15 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂಬ ಪೋಸ್ಟರ್ ಹೈದರಾಬಾದ್’ನ ಬೀದಿ ಬೀದಿಗಳಲ್ಲಿ ರಾರಾಜಿಸುತ್ತಿದೆ.
ಹೈದರಾಬಾದ್’ನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಶಾಸಕರನ್ನು ಖರೀದಿಸುವಲ್ಲಿ ಪರಿಣಿತರಾಗಿರುವ ಬಿ.ಎಲ್. ಸಂತೋಷ್ ಬೇಕಾಗಿದ್ದಾರೆ ಎನ್ನುವ ಪೋಸ್ಟರ್ ಹಾಕಲಾಗಿದೆ. ಕೇವಲ ಬಿ.ಎಲ್. ಸಂತೋಷ್ ಅವರ ಬಗ್ಗೆ ಮಾತ್ರವಲ್ಲ ಪ್ರಧಾನಿ ಮೋದಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೋಸ್ಟರ್’ಗಳಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಕ್ರಿಮಿನಲ್ ಮತ್ತು ವಾಂಟೆಡ್ ಎಂದು ಬರೆಯಲಾಗಿದೆ.
ಇನ್ನೊಂದೆಡೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಅವರು ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿದ್ದಾರೆ. ಇದರ ನಡುವೆ ಬಿಜೆಪಿ ವಿರುದ್ಧ ತೆಲಂಗಾಣ ಆಡಳಿತಾರೂಢ ಭಾರತ್ ರಾಷ್ಟ್ರೀಯ ಸಮಿತಿ ಟ್ವಿಟ್ಟರ್ ವಾರ್ ನಡೆಸಿದೆ.