ಮಂಗಳೂರು: ಗಾಂಜಾ ಸೇರಿದಂತೆ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ವಾರೆಂಟ್ ಬಂದಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಬಂದರು ಟೌನ್ ಕಾಂಪೌಂಡ್ ನಿವಾಸಿ ಅಬ್ದುಲ್ ರಶೀದ್ ಬಂಧಿತ ಆರೋಪಿ.
ಆರೋಪಿ ಅಬ್ದುಲ್ ರಶೀದ್ ವಿರುದ್ಧ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಠಾಣೆ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಈತ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ, ಪೊಲೀಸರ ಕೈಗೂ ಸಿಗದೆ ತಲೆಮರೆಸಿಕೊಂಡಿದ್ದ. ಇದೀಗ ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.