ಫಹದ್’ರೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ರಿಸೆಪ್ಶನ್’ನಲ್ಲಿ ಭಾಗವಹಿಸಿದ ರಾಹುಲ್ ಗಾಂಧಿ

Prasthutha|

ನವದೆಹಲಿ: ಇತ್ತೀಚೆಗೆ ಸಮಾಜವಾದಿ ಪಕ್ಷದ ನಾಯಕ ಫಹಾದ್ ಅಹ್ಮದ್ ಜೊತೆ ದಾಂಪತ್ಯಕ್ಕೆ ಕಾಲಿಟ್ಟ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಅವರ ಮದುವೆ ರಿಸೆಪ್ಶನ್’ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದಾರೆ.

- Advertisement -


ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಫೆಬ್ರವರಿಯಲ್ಲಿ ನಟಿ ಸ್ವರಾ ಭಾಸ್ಕರ್ ಅವರು ಫಹದ್’ರೊಂದಿಗೆ ರಿಜಿಸ್ಟರ್ ಮದುವೆಯಾಗಿರುವುದಾಗಿ ತಿಳಿಸಿದ್ದರು. ರಿಸೆಪ್ಶನ್’ನಲ್ಲಿ ಸಿನಿಮಾ ಸೆಲೆಬ್ರಿಟಿಗಳು ಮತ್ತು ರಾಜಕೀಯ ಪಕ್ಷದ ನಾಯಕರು ಪಾಲ್ಗೊಂಡಿದ್ದಾರೆ. ಸ್ವರಾ- ಫಹದ್ ರಿಸೆಪ್ಶನ್ ಸಂಭ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಭಾಗವಹಿಸಿ ನವ ದಂಪತಿಗೆ ಶುಭ ಹಾರೈಸಿದ್ದಾರೆ. ಮಧ್ಯಪ್ರದೇಶ ಉಜ್ಜಯಿನಿಯಲ್ಲಿ ನಡೆದ ಭಾರತ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಜೊತೆ ಸ್ವರಾ ಭಾಸ್ಕರ್ ಹೆಜ್ಜೆ ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.

- Advertisement -



Join Whatsapp