ಪ್ರಚೋದನಕಾರಿ ಭಾಷಣ ಮಾಡಿದ ಸಂಘಪರಿವಾರದ ನರಸಿಂಹ ಮಾಣಿ ವಿರುದ್ಧ ಸುಮೊಟೊ ಕೇಸ್ ದಾಖಲಿಸಲು SDPI ಒತ್ತಾಯ

Prasthutha|

ಪುತ್ತೂರು: ಇಡ್ಕಿದು ಗ್ರಾಮದ ಮಿತ್ತೂರಿನಲ್ಲಿ ಸಂಘ ಪರಿವಾರದ ಸಂಘಟನೆ ನಡೆಸಿದ ಕಾರ್ಯಕ್ರಮದಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ನರಸಿಂಹ ಮಾಣಿಯ ವಿರುದ್ಧ ಸುಪ್ರೀಂ ಕೋರ್ಟ್ ಆದೇಶದನ್ವಯ ಸುಮೊಟೊ ಪ್ರಕರಣ ದಾಖಲಿಸುವಂತೆ SDPI ಕಬಕ ಬ್ಲಾಕ್ ಅಧ್ಯಕ್ಷ ಉಮ್ಮರ್ ಫಾರೂಕ್ ಕಬಕ ಒತ್ತಾಯಿಸಿದ್ದಾರೆ.

- Advertisement -


ಅತೀ ಹೆಚ್ಚು ಮುಸ್ಲಿಮರಿದ್ದಾರೆ ಎಂಬ ಕಾರಣಕ್ಕಾಗಿ ಮಿತ್ತೂರು ಸಮೀಪದ ಪಾಟ್ರಕೋಡಿಯನ್ನು ಪಾಕಿಸ್ತಾನಕ್ಕೆ ಹೋಲಿಸಿ ದೇಶದ್ರೋಹದ ಹೇಳಿಕೆ ನೀಡಿ ಶಾಂತಿ ಕದಡಲು ಪ್ರಯತ್ನಿಸಿದ ಕೋಮು ವಿಷಬೀಜ ಬಿತ್ತಿದ ನರಸಿಂಹ ಮಾಣಿಯನ್ನು ಗಡೀಪಾರು ಮಾಡಬೇಕು ಮತ್ತು ಇಂತಹ ಪ್ರಚೋದನಕಾರಿ ಹೇಳಿಕೆ ನೀಡುವವರನ್ನು ಸುಪ್ರೀಂ ಕೋರ್ಟ್ ಆದೇಶದಂತೆ ಸುಮೊಟೊ ಪ್ರಕರಣ ದಾಖಲಿಸಿ ಬಂಧಿಸಿ ಜೈಲಿಗಟ್ಟಿ ಸಮಾಜದ ಶಾಂತಿ ಸುವ್ಯವಸ್ಥೆ ಹಾಗೂ ಸೌಹಾರ್ದತೆಯನ್ನು ಕಾಪಾಡಬೇಕು ಎಂದು ಅವರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.



Join Whatsapp