ಎಸ್ ಡಿ ಪಿ ಐ ರಾಷ್ಟ್ರೀಯ ಚುನಾವಣಾ ವೀಕ್ಷಕ ದೆಹ್ಲಾನ್ ಬಾಖವಿಯಿಂದ ಬಂಟ್ವಾಳ ಕ್ಷೇತ್ರದ ಚುನಾವಣಾ ಸಮಿತಿಯೊಂದಿಗೆ ಸಭೆ

Prasthutha|

ಬಂಟ್ವಾಳ: ಎಸ್ ಡಿ ಪಿ ಐ  ರಾಷ್ಟ್ರೀಯ ಚುನಾವಣಾ ವೀಕ್ಷಕ ದೆಹ್ಲಾನ್ ಬಾಖವಿ ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣಾ ಸಮಿತಿಯೊಂದಿಗೆ ಮಹತ್ವದ ಸಭೆಯನ್ನು ಬಂಟ್ವಾಳದ ಪಕ್ಷದ ಕಛೇರಿಯಲ್ಲಿ ನಡೆಸಿದರು.

- Advertisement -

 ಈ ಸಭೆಯಲ್ಲಿ ಬಂಟ್ವಾಳ ಕ್ಷೇತ್ರದ ಸಮಗ್ರ ವರದಿಯನ್ನು ಕೂಲಂಕುಶವಾಗಿ ಚರ್ಚಿಸಿ ಬಂಟ್ವಾಳದಲ್ಲಿ ಇಲ್ಯಾಸ್ ಮುಹಮ್ಮದ್ ತುಂಬೆ  ಗೆಲ್ಲುವ ಎಲ್ಲಾ ಅವಕಾಶಗಳಿದ್ದು ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಚುನಾವಣಾ ಸಮಿತಿಗೆ ದೆಹ್ಲಾನ್ ಬಾಖವಿ  ಕರೆ ನೀಡಿದರು.

ಈ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ  ರಾಷ್ಟ್ರೀಯ ಚುನಾವಣಾ ವೀಕ್ಷಕರಾದ ಫೈಸಲ್ ಸಾಬ್ ಮಾತನಾಡಿ ಚುನಾವಣೆಯಲ್ಲಿ ಜಯಗಳಿಸಲು ಬೇಕಾದ ಕಾರ್ಯ ತಂತ್ರದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

- Advertisement -

ರಾಜ್ಯ ಚುನಾವಣಾ ಉಸ್ತುವಾರಿಯಾದ  ಅಪ್ಸರ್ ಕೊಡ್ಲಿಪೇಟೆ ಬಂಟ್ವಾಳ ಕ್ಷೇತ್ರದ ಕಾರ್ಯ ಚಟುವಟಿಕೆ ಬಗ್ಗೆ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ  ಸಹ ಉಸ್ತುವಾರಿಯಾದ  ನವಾಝ್ ಉಳ್ಳಾಲ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ, ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರ್, ಬಂಟ್ವಾಳ ಕ್ಷೇತ್ರಾಧ್ಯಕ್ಷ ಮುನೀಷ್ ಆಲಿ, ಬಂಟ್ವಾಳ ಕ್ಷೇತ್ರ ಚುನಾವಣಾ ಉಸ್ತುವಾರಿ ಶಾಹುಲ್ ಹಮೀದ್ ಎಸ್ ಎಚ್, ಮತ್ತು ಚುನಾವಣಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.



Join Whatsapp