ರಾಮನಗರ: ತಾಲೂಕಿನ ಕರಿಕಲ್ ದೊಡ್ಡಿ ಬಳಿಯಿರುವ ಕುಕ್ಕರ್ ತಯಾರಿಕಾ ಕಂಪೆನಿ ಮೇಲೆ ತಹಶೀಲ್ದಾರ್ ತೇಜಸ್ವಿನಿ ನೇತೃತ್ವದಲ್ಲಿ ದಾಳಿ ಮಾಡಿದ್ದು, 2900 ಕುಕ್ಕರ್‌ಗಳನ್ನು ಜಪ್ತಿ ಮಾಡಲಾಗಿದೆ.
ವಿಶ್ವಾಸ್ ವೈದ್ಯ ಎಂಬವರಿಗೆ ಸೇರಿದ ಕಂಪೆನಿಗೆ ದಾಳಿ ನಡೆಸಿದ ತಹಶೀಲ್ದಾರ್, ಸವದತ್ತಿ ಯಲ್ಲಮ್ಮ ಕ್ಷೇತ್ರದ ಮತದಾರರಿಗೆ ಹಂಚಲು ಸಿದ್ಧತೆ ಮಾಡಿಕೊಳ್ಳಲಾಗಿದ್ದ ಕುಕ್ಕರ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.