ಬೆಂಗಳೂರು: ರಾಜ್ಯದ ಎಲ್ಲಾ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹತ್ತು ನಿಮಿಷಗಳ ಕಾಲ ಧ್ಯಾನ ಮತ್ತು ನೈತಿಕ ಶಿಕ್ಷಣ ನೀಡುವ ಕುರಿತು ಶಿಕ್ಷಣ ತಜ್ಞರಿಂದ ವರದಿ ಪಡೆಯಲು ಡಾ.ಗುರುರಾಜ ಕರ್ಜಗಿ ಅವರ ಅಧ್ಯಕ್ಷತೆಯಲ್ಲಿ ಆರು ಮಂದಿ ಸದಸ್ಯರ ಸಮಿತಿಯನ್ನು ರಾಜ್ಯ ಸರ್ಕಾರ ರಚಿಸಿದೆ.
ಬೆಂಗಳೂರು ರಾಜಾಜಿನಗರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪಿ.ಜಿ.ದ್ವಾರಕಾನಾಥ್, ವಿಭು ಅಕಾಡಮಿಯ ಡಾ.ವಿ.ಬಿ.ಆರತಿ, ಡ್ರೀಮ್ ಎ ಡ್ರೀಮ್ ಸಂಸ್ಥೆಯ ಸಿಇಒ ಸುಚೇತಾ ಭಟ್, ಸೋಫಿಯಾ ಪ್ರೌಢ ಶಾಲೆಯ ಪ್ರಾಂಶುಪಾಲರಾದ ಸಿಸ್ಟರ್ ಅಲ್ಸನ್ ಎಸ್ ಎನ್ ಡಿ, ಚಿಕ್ಕಬಳ್ಳಾಪುರ ಬಾಗೇಪಳ್ಳಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಬಿ.ಅಮೀರ್ ಜಾನ್ ಅವರನ್ನು ಸಮಿತಿ ಸದಸ್ಯರಾಗಿ ನೇಮಿಸಲಾಗಿದೆ.
ಈ ಸಮಿತಿಯು ಒಂದು ತಿಂಗಳ ಒಳಗಾಗಿ ಸರ್ಕಾರಕ್ಕೆ ವರದಿ ನೀಡಲು ಕೋರಲಾಗಿದೆ.
ರಾಜ್ಯದ ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಹತ್ತು ನಿಮಿಷ ಧ್ಯಾನ, ನೈತಿಕ ಶಿಕ್ಷಣ: ಡಾ.ಗುರುರಾಜ ಕರ್ಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ
Prasthutha|