ಕಲಬುರಗಿ : ವಿದ್ಯುತ್ ಸರ್ವಿಸ್ ವೈರ್ ತಗುಲಿ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಚಿಂಚೋಳಿ ಪಟ್ಟಣದ ಧನಗರದಲ್ಲಿ ನಡೆದಿದೆ.
ಮೃತರನ್ನು ತಾಯಿ ಶರಣಮ್ಮ(45), ಮಕ್ಕಳಾದ ಮುಖೇಶ್ (22) ಮತ್ತು ಸುರೇಶ್ (20) ಎಂದು ಗುರುತಿಸಲಾಗಿದೆ.
ಮನೆ ಸಮೀಪ ತಂದಿಟ್ಟಿದ್ದ ತೊಗರಿ ಹೊಟ್ಟು ನೆನೆಯುತ್ತದೆ ಎಂದು ಅದನ್ನು ಮುಚ್ಚಲು ಶರಣಮ್ಮ ಹೊರ ಹೋಗಿದ್ದಾರೆ. ಮಕ್ಕಳಾದ ಮುಖೇಶ್, ಸುರೇಶ ಹಿಂಬಾಲಿಸಿ ಹೋಗಿದ್ದು ಮೂವರಿಗೂ ವಿದ್ಯುತ್ ಸ್ಪರ್ಶಿಸಿದೆ. ಪರಿಣಾಮ ಮೂವರು ಮೃತಪಟ್ಟಿದ್ದಾರೆ.