ಭೋಪಾಲ್: ಕಾರ್ಯಕ್ರಮವೊಂದರಲ್ಲಿ ಡ್ಯಾನ್ಸ್ ಮಾಡುತ್ತಿರುವಾಗಲೇ ಸರ್ಕಾರಿ ನೌಕರರೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಭೋಪಾಲ್’ನಲ್ಲಿ ನಡೆದಿದೆ.
ಸುರೇಂದ್ರ ಕುಮಾರ್ ದೀಕ್ಷಿತ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಸುರೇಂದ್ರ ಕುಮಾರ್ ಅಂಚೆ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಸುರೇಂದ್ರ ಅವರು ಡ್ಯಾನ್ಸ್ ಮಾಡುತ್ತಿದ್ದಂತೆಯೇ ಕುಸಿದು ಬಿದ್ದ ದೃಶ್ಯವನ್ನು ನೆರೆದಿದ್ದವರು ತಮ್ಮ ಮೊಬೈಲ್’ನಲ್ಲಿ ಸೆರೆ ಹಿಡಿದಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಸುರೇಂದ್ರ ಅವರು ಕುಸಿದು ಬೀಳುತ್ತಿದ್ದಂತೆಯೇ ಅಲ್ಲೆ ಇದ್ದವರು ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ.