ಕಲಬುರಗಿ: ಕಲಬುರಗಿಯ ಸಾಮಾಜಿಕ ಕಾರ್ಯಕರ್ತೆ ಮಜತ್ ಸುಲ್ತಾನ್ (35) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ನಗರದ ಹಾಗರಗಾ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮಜತ್ ಸುಲ್ತಾನ್ ಅವರ ವಾಹನಕ್ಕೆ ಅಪರಿಚಿತ ಕಾರೊಂದು ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿದ್ದು, ರಸ್ತೆಗೆ ಬಿದ್ದ ಸುಲ್ತಾನ್ ಅವರ ಮೇಲೆ ಕಾರಿನಲ್ಲಿದ್ದ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದಾರೆ.
ತೀವ್ರ ರಕ್ತಸ್ರಾವದಿಂದ ಸುಲ್ತಾನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಾಡಹಗಲೇ ನಗರದಲ್ಲಿ ನಡೆದ ಈ ಘಟನೆಯಿಂದ ಕಲಬುರಗಿ ಜನರು ಬೆಚ್ಚಿಬಿದ್ದಿದ್ದಾರೆ.
ಕಲಬುರಗಿ ನಗರದ ಜಂಜಂ ಕಾಲೋನಿ ನಿವಾಸಿಯಾಗಿರುವ ಮಜತ್ ಸುಲ್ತಾನ್ ಸಾಮಾಜಿಕ ಕಾರ್ಯಕರ್ತೆಯಾಗಿದ್ದರು. ಹಲವು ಹೋರಾಟಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಅವರ ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಹತ್ಯೆ ಕಾರಣ ಏನು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.
ಸಾಮಾಜಿಕ ಕಾರ್ಯಕರ್ತೆ ಮಜತ್ ಸುಲ್ತಾನ್ ಬರ್ಬರ ಹತ್ಯೆ
Prasthutha|