ಬೆಂಗಳೂರು: ಬಿಲ್ಕಿಸ್ ಬಾನು ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ 11 ಅಪರಾಧಿಗಳನ್ನು ಅವಧಿ ಪೂರ್ವ ಬಿಡುಗಡೆ ಮಾಡಲು ಅನುಮತಿ ನೀಡಿದ ಗುಜರಾತ್ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಮತ್ತು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠದ ಮುಂದೆ ಮಾರ್ಚ್ 27, 2023 ರಂದು ಪಟ್ಟಿ ಮಾಡಲಾಗಿದೆ.
ಬಿಲ್ಕೀಸ್ ಬಾನು ಅವರ ಪರ ವಕೀಲೆ ಶೋಭಾ ಗುಪ್ತಾ ಅವರು ಭಾರತದ ಸುಪ್ರೀಂ ಕೋರ್ಟ್ ಮುಂದೆ ಐದು ಬಾರಿ ಪ್ರಸ್ತಾಪಿಸಿದ ನಂತರ ಈ ವಿಷಯವನ್ನು ಪಟ್ಟಿ ಮಾಡಲಾಗಿದೆ.
ಎರಡು ದಿನಗಳ ಹಿಂದೆ ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿದಾಗ, ಅರ್ಜಿಯ ವಿಚಾರಣೆಗಾಗಿ ವಿಶೇಷ ಪೀಠವನ್ನು ರಚಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಗುಪ್ತಾ ಅವರಿಗೆ ಭರವಸೆ ನೀಡಿತ್ತು.
ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆ: ಮಾರ್ಚ್ 27ರಂದು ವಿಚಾರಣೆಗೆ ಪಟ್ಟಿ ಮಾಡಿದ ಸುಪ್ರೀಂ
Prasthutha|