ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು ಧ್ರುವನಾರಾಯಣ್ ಪುತ್ರ ದರ್ಶನ್ ಗೆ ನಂಜನಗೂಡು ಕ್ಷೇತ್ರದಿಂದ ಟಿಕೆಟ್ ಘೋಷಣೆ ಮಾಡಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಈಗಾಗಲೇ ಬಿಡುಗಡೆಗೊಂಡಿದೆ. ಮೈಸೂರಿನ 11 ಕ್ಷೇತ್ರಗಳಲ್ಲಿ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಅದರಲ್ಲೂ ಮೈಸೂರಿನ ನಂಜನಗೂಡು ಕ್ಷೇತ್ರದ ಅಭ್ಯರ್ಥಿ ಯಾರು ಎನ್ನುವುದರ ಬಗ್ಗೆ ತೀವ್ರ ಕುತೂಹಲ ಮೂಡಿಸಿತ್ತು. ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗೆ ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಮತ್ತು ಧ್ರುವನಾರಾಯಣ್ ನಡುವೆ ಫೈಟ್ ಸೃಷ್ಟಿಯಾಗಿತ್ತು.