ಸುರತ್ಕಲ್: ಎಸ್.ಡಿ.ಪಿ.ಐ ಕಾರ್ಯಕರ್ತರ ಸ್ನೇಹ ಸಮ್ಮಿಲನ ಹಾಗೂ ಇಫ್ತಾರ್ ಕೂಟ

Prasthutha|

ಸುರತ್ಕಲ್: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುರತ್ಕಲ್ ಬ್ಲಾಕ್ ವ್ಯಾಪ್ತಿಯ ಕಾರ್ಯಕರ್ತರ ಸ್ನೇಹ ಸಮ್ಮಿಳನ ಹಾಗೂ ಇಫ್ತಾರ್ ಕೂಟವು ಕಾಟಿಪಳ್ಳದ ಜಾಸ್ಮಿನ್ ಹಾಲ್’ನಲ್ಲಿ ಬ್ಲಾಕ್ ಅಧ್ಯಕ್ಷ ಸಲಾಂ ಕಾನ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

- Advertisement -


ಎಸ್’ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಅವರು ಮುಂದಿನ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತನಾಡಿ, ಪ್ರಸ್ತುತ ರಾಜಕೀಯ ವಿದ್ಯಮಾನದಲ್ಲಿ ಎಸ್’ಡಿಪಿಐ ಒಂದೇ ಪರ್ಯಾಯ ಅದುದರಿಂದ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ಮೂಲಕ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ವಿಧಾನಸಭೆಗೆ ಕಳುಹಿಸಲು ಎಲ್ಲಾ ಕಾರ್ಯಕರ್ತರು ಈಗಲೇ ಕಾರ್ಯೋನ್ಮುಖರಾಗಬೇಕೆಂದು ಹೇಳಿದರು.


ಈ ಸಂಧರ್ಭದಲ್ಲಿ ಎಸ್’ಡಿಪಿಐ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಕಾರ್ಯದರ್ಶಿ ಅಶ್ರಫ್ ಅಡ್ಡೂರು, ಕ್ಷೇತ್ರ ಸಮಿತಿ ಸದಸ್ಯರಾದ ಅಝರ್ ಉಳಾಯಿಬೆಟ್ಟು, ಬ್ಲಾಕ್ ಕಾರ್ಯದರ್ಶಿ ಅರಫತ್ ಚೊಕ್ಕಬೆಟ್ಟು, ಝ್ಯೆನ್ ಕಾಟಿಪಳ್ಳ ಹಾಗೂ ಸಮೀರ್ ಕಾಟಿಪಳ್ಳ ಉಪಸ್ಥಿತರಿದ್ದರು.



Join Whatsapp