ಆಧಾರ್-ಪಾನ್ ಕಾರ್ಡ್ ಜೋಡಣೆ: ಗಡುವು ವಿಸ್ತರಣೆ

Prasthutha|

ನವದೆಹಲಿ:ಪಾನ್ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕವನ್ನು 2023 ರ ಜೂನ್ 30 ರವರೆಗೆ ವಿಸ್ತರಿಸಲಾಗಿದೆ.

- Advertisement -

ಜೂನ್ 30, 2023 ರೊಳಗೆ ಪ್ಯಾನ್ ಕಾರ್ಡ್’ಗಳನ್ನು ಆಧಾರ್ ಕಾರ್ಡ್’ಗಳೊಂದಿಗೆ ಲಿಂಕ್ ಮಾಡದಿದ್ದರೆ, ಪ್ಯಾನ್ ಕಾರ್ಡ್ ಕಾರ್ಯನಿರ್ವಹಿಸುವುದಿಲ್ಲ ಎಂದು ಹಣಕಾಸು ಸಚಿವಾಲಯ ಹೇಳಿದೆ.

ಇದೇ ವರ್ಷದ ಜೂನ್ 30 ಕೊನೇ ದಿನವಾಗಿದೆ.

- Advertisement -

  1 ಸಾವಿರ ರೂ ದಂಡ ಸಹಿತವಾಗಿ ಆಧಾರ್ ಹಾಗೂ ಪಾನ್ ಕಾರ್ಡ್ ಜೋಡಣೆಗೆ 2023ರ ಮಾರ್ಚ್ 31ರವರೆಗೆ ಸಮಯ ನೀಡಲಾಗಿತ್ತು. ಕೊನೆಯ ದಿನ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧದ ಜನರ ಆಕ್ರೋಶ ತೀವ್ರಗೊಂಡಿತ್ತು. ಜತೆಗೆ ಜೋಡಣೆಗೆ ವೇದಿಕೆಯಾಗಿರುವ ಆದಾಯ ತೆರಿಗೆ ಪೋರ್ಟಲ್‌’ನಲ್ಲಿನ ಈ ವಿಭಾಗ ತೆರೆದುಕೊಳ್ಳುತ್ತಲೇ ಇರಲಿಲ್ಲ. ಈ ತಾಂತ್ರಿಕ ದೋಷದ ಬಗ್ಗೆ ಅನೇಕರು ದೂರು ನೀಡಿದ್ದರು. ಈಗ ದಿನಾಂಕವನ್ನು ಜೂನ್ 30ರವರೆಗೂ ವಿಸ್ತರಣೆ ಮಾಡಲಾಗಿದೆ ಎಂದು ನೇರ ತೆರಿಗೆಗಳ ಕೇಂದ್ರ ಮಂಡಳಿ (ಸಿಬಿಡಿಟಿ) ಮಂಗಳವಾರ ಹೇಳಿಕೆ ಬಿಡುಗಡೆ ಮಾಡಿದೆ.

ಲಿಂಕ್ ಮಾಡಲು 2022ರ ಮಾರ್ಚ್ 31ರವರೆಗೆ ಉಚಿತವಾಗಿತ್ತು. 2022ರ ಏಪ್ರಿಲ್ 1ರಿಂದ 500 ರೂ.ಪಾವತಿಸಿ ಆಧಾರ್ ಲಿಂಕ್ ಮಾಡಬೇಕಾಗಿತ್ತು. 2022ರ ಜೂನ್‌ನಿಂದ 2023ರ ಮಾರ್ಚ್ 31ರವರಗೆ ಲಿಂಕ್ ಮಾಡಬೇಕಾದರೆ 1,000 ಪಾವತಿಸಬೇಕು ಎಂದು ಹೇಳಲಾಗಿತ್ತು. ಒಂದು ವೇಳೆ ಈ ಗಡುವಿನ ಒಳಗೆ ಲಿಂಕ್ ಮಾಡದಿದ್ದರೇ ಆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂ.ದಂಡ ಹಾಕಲಾಗುವುದು ಎಂದು ತಿಳಿಸಲಾಗಿತ್ತು. ಆದರೆ, ಇದೀಗ ಗುಡುವು ಮತ್ತೆ ವಿಸ್ತರಣೆಯಾಗಿರುವುದರಿಂದ 1000 ಶುಲ್ಕದೊಂದಿಗೆ ಜೂನ್ 30ರವರಗೆ ಆಧಾರ್‌ ಸಂಖ್ಯೆಯನ್ನು ಪ್ಯಾನ್‌ಗೆ ಲಿಂಕ್ ಮಾಡಬಹುದು.

 



Join Whatsapp