ಚುನಾವಣೆ ದಿನಾಂಕ ಘೋಷಣೆಯಾದ ಕೂಡಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಜಗದೀಶ್ ಶೆಟ್ಟರ್

Prasthutha|

ಹುಬ್ಬಳ್ಳಿ: ಚುನಾವಣೆ ದಿನಾಂಕ ಘೋಷಣೆಯಾದ ಕೂಡಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಚುನಾವಣೆ ದಿನಾಂಕ ಘೋಷಣೆಯಾದ ಕೂಡಲೇ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ನಡೆದು ಪಟ್ಟಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿಯೂ ಇದೇ ಮಾದರಿ ಅನುಸರಿಸಲಾಗುತ್ತದೆ. ಇದು ನಮ್ಮ ಪಕ್ಷದ ಸಂಸ್ಕೃತಿ ಎಂದರು.


ಮೀಸಲಾತಿ ವಿಚಾರದಲ್ಲಿ ಯಾರಿಗೆ ಗೊಂದಲ ಇದೆಯೋ ಅವರು ನೇರವಾಗಿ ಮುಖ್ಯಮಂತ್ರಿ ಅಥವಾ ಸಂಬಂಧಪಟ್ಟ ಸಚಿವರೊಂದಿಗೆ ಭೇಟಿಯಾಗಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.



Join Whatsapp