ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ

Prasthutha|

ಬೆಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ 21 ವರ್ಷದ ಆರೋಪಿಗೆ ನ್ಯಾಯಾಲಯ ಪೋಕ್ಸೋ ಕಾಯ್ದೆಯಡಿ 10 ವರ್ಷಗಳ ಕಠಿಣ ಸಜೆ ಜೊತೆಗೆ 10 ಸಾವಿರ ರೂ. ದಂಡ ವಿಧಿಸಿದೆ.

- Advertisement -


ಅಲ್ಲದೇ ಸಂತ್ರಸ್ತೆಗೆ ಆರೋಪಿಯು 4 ಲಕ್ಷ ರೂ ಪರಿಹಾರ ನೀಡುವಂತೆ ಆದೇಶಿಸಿದೆ. ಕಳೆದ 2017ರಲ್ಲಿ 14 ವರ್ಷದ ಬಾಲಕಿ ಕುರಿಕಾಯಲು ಹೋಗುತ್ತಿದ್ದಾಗ ಆಕೆಯನ್ನು ಆರೋಪಿ, ಅಜ್ಜಿಯೊಬ್ಬರು ರಸ್ತೆಯಲ್ಲಿ ಬಿದ್ದಿದ್ದಾರೆ ನೋಡಲು ಬನ್ನಿ ಎಂದು ಆನೇಕಲ್ ತಾಲೂಕಿನ ಜಿಗಣಿ ಹೊರವಲಯಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ.


ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ವಿವರಾದ ಆರೋಪಪಟ್ಟಿ ಸಲ್ಲಿಸಲಾಗಿತ್ತು.
ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.



Join Whatsapp