ಇಂದಿನಿಂದಲೇ ರಾಜ್ಯಾದ್ಯಂತ ನೀತಿಸಂಹಿತೆ ಜಾರಿ

Prasthutha|

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಇಂದಿನಿಂದಲೇ ನೀತಿಸಂಹಿತೆ ಜಾರಿ ಆಗಲಿದೆ.

- Advertisement -


ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬರಲಿದೆ.

ನೀತಿ ಸಂಹಿತೆ ಜಾರಿಯಾದ ಬಳಿಕ ಯಾವುದೇ ಸರ್ಕಾರಿ ಕಾರ್ಯಕ್ರಮಗಳನ್ನು ಮಾಡುವ ಹಾಗಿಲ್ಲ. ಆದ್ದರಿಂದ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರಿ ಕಾರ್ಯಕ್ರಮಗಳನ್ನೆಲ್ಲ ರದ್ದುಪಡಿಸಿದ್ದಾರೆ. ಸಿಎಂ ಸೇರಿದಂತೆ ಸಚಿವರು ಸರ್ಕಾರಿ ಸೌಲಭ್ಯವನ್ನು ಬಳಸುವಂತಿಲ್ಲ. ಹಾಗೂ ಸರ್ಕಾರ ಯಾವುದೇ ಹೊಸ ಯೋಜನೆ ಘೋಷಣೆ ಮಾಡುವಂತಿಲ್ಲ. ಆದರೆ ಸಿಎಂ ಸೇರಿ ಸಚಿವರು, ಶಾಸಕರಿಗೆ ಎಂದಿನಂತೆ ಭದ್ರತೆ ಇರುತ್ತದೆ. ಎಸ್ಕಾರ್ಟ್ ಸೇರಿದಂತೆ ಎಲ್ಲಾ ರೀತಿಯ ಭದ್ರತೆ ಮುಂದುವರೆಯಲಿದೆ.



Join Whatsapp