ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಶಾಸಕ ಎನ್.ವೈ.ಗೋಪಾಲಕೃಷ್ಣ ರಾಜೀನಾಮೆ

Prasthutha|

ಬೆಂಗಳೂರು: ಬಿಜೆಪಿಯ ಮತ್ತೊಂದು ವಿಕೆಟ್ ಪತನಗೊಂಡಿದ್ದು, ಬಿಜೆಪಿಯ ಹಿರಿಯ ಶಾಸಕ ಎನ್.ವೈ. ಗೋಪಾಲಕೃಷ್ಣ ತಮ್ಮ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.

- Advertisement -


ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಶಾಸಕ ಎನ್‌.ವೈ. ಗೋಪಾಲಕೃಷ್ಣ ಅವರು ಶಿರಸಿಯಲ್ಲಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಮನೆಗೆ ತೆರಳಿ ರಾಜೀನಾಮೆ ನೀಡಿದ್ದಾರೆ. ವಯಸ್ಸಿನ ಕಾರಣಕ್ಕೆ ರಾಜಕೀಯ ನಿವೃತ್ತಿ ಪಡೆಯಲು ರಾಜೀನಾಮೆ ನೀಡುತ್ತೇನೆ ಎಂದು ಗೋಪಾಲಕೃಷ್ಣ ಹೇಳಿದ್ದಾರೆ.


ಆದರೆ ಅವರು ಮೊಳಕಾಲ್ಮೂರಿನಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಸಾಧ್ಯತೆಯಿದೆ. ಹಿಂದಿನ ಎಲೆಕ್ಷನ್ ನಲ್ಲಿ ಟಿಕೆಟ್ ನಿಂದ ವಂಚಿತ ಆಗಿದ್ದ ಗೋಪಾಲಕೃಷ್ಣ, ಜನಾರ್ದನ ರೆಡ್ಡಿ, ಶ್ರೀರಾಮುಲು ಪ್ರಭಾವದಿಂದ ಕೂಡ್ಲಿಗಿಯಿಂದ ಸ್ಪರ್ಧಿಸಿದ್ದರು. ಮಾಜಿ ಸಚಿವ ಆರ್‌.ವಿ. ದೇಶಪಾಂಡೆ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗುವ ಸಾಧ್ಯತೆಯಿದೆ.



Join Whatsapp