ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆಡಿಎಸ್’ನ ಎ.ಟಿ.ರಾಮಸ್ವಾಮಿ

Prasthutha|

ಬೆಂಗಳೂರು: ಜೆಡಿಎಸ್ ಹಿರಿಯ ಶಾಸಕ ಎ.ಟಿ.ರಾಮಸ್ವಾಮಿ ಶುಕ್ರವಾರ ಬೆಂಗಳೂರಿನಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -


ಅರಕಲಗೂಡು ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ನಿಂದ ಶಾಸಕರಾಗಿ ಆಯ್ಕೆಯಾಗಿದ್ದ ಎ.ಟಿ. ರಾಮಸ್ವಾಮಿ ಶುಕ್ರವಾರ ಬೆಂಗಳೂರಿನಲ್ಲಿ ವಿಧಾನಸಭೆ ಕಾರ್ಯದರ್ಶಿ ಮೂಲಕ ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎ.ಟಿ. ರಾಮಸ್ವಾಮಿ, ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಸ್ಪೀಕರ್ ಬಂದ ಬಳಿಕ ಅಂಗೀಕಾರ ಮಾಡುವಂತೆ ಮನವಿ ಮಾಡಿದ್ದೇನೆ ಎಂದರು.
ನಾನು ಅಧಿಕಾರ ಆಸೆ ಪಡೆದವನಲ್ಲ. ನಾನು ವಿರೋಧ ಪಕ್ಷದವರ ಜತೆ ಸಹ ಉತ್ತಮ ಸಂಪರ್ಕ ಹೊಂದಿದ್ದೇನೆ. ನಾನು ರಾಜಕೀಯ ವಿರೋಧಿಗಳಿಗೂ ಒಳ್ಳೆಯದಾಗಲಿ ಎಂದು ಭಾವಿಸುತ್ತೇನೆ. ಮುಂದೆ ಅವಕಾಶ ಸಿಕ್ಕಿದರೆ ಜನರ ಸೇವೆಗೆ ಮುಡುಪಾಗಿ ಇಡುತ್ತಿದ್ದೇನೆ ಎಂದರು.


ಯಾವ ಪಕ್ಷ ಸೇರುತ್ತೇನೆ ಎನ್ನುವ ಕುರಿತು ರಾಮಸ್ವಾಮಿ ಸ್ಪಷ್ಟವಾಗಿ ತಿಳಿಸಿಲ್ಲ. ಅವರು ಬಿಜೆಪಿ ಅಭ್ಯರ್ಥಿಯಾಗಿ ಅರಕಲಗೂಡಿನಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.



Join Whatsapp