ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಲು ಕೋರಿ AAPಯಿಂದ ಹೈಕೋರ್ಟ್’ಗೆ ಅರ್ಜಿ

Prasthutha|

ಬೆಂಗಳೂರು: ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಎಎಪಿ ಪಕ್ಷ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಪುರಸ್ಕರಿಸಿದೆ.

- Advertisement -

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸಾಧನೆ ತೋರಿದ್ದ ಆಮ್ ಆದ್ಮಿ ಪಕ್ಷ ರಾಷ್ಟ್ರೀಯ ಪಕ್ಷದ  ಮಾನ್ಯತೆಗೆ ಅರ್ಹತೆಯನ್ನು ಪಡೆದುಕೊಂಡಿತ್ತು . ಆದರೆ, ಇಲ್ಲಿಯವರೆಗೂ ಮಾನ್ಯತೆ ನೀಡದಿರುವುದನ್ನು ಪ್ರಶ್ನಿಸಿ ಎಎಪಿ ಕರ್ನಾಟಕ  ಹೈ ಕೋರ್ಟ್ ಗೆ ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ದರ್ಶನ್ ಜೈನ್ ರಿಟ್ ಅರ್ಜಿ ಸಲ್ಲಿಸಿದ್ದರು.

ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಳ್ಳಲು ನಾಲ್ಕು ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿರಬೇಕು, ಹಾಗೂ ನಾಲ್ಕು ರಾಜ್ಯಗಳಲ್ಲಿ  ಕನಿಷ್ಠ 6% ಮತ ಪಡೆದಿರಬೇಕು. ದೆಹಲಿ, ಪಂಜಾಬ್, ಗೋವಾ ಮತ್ತು ಗುಜರಾತ್ ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿರುವ ಆಮ್ ಆದ್ಮಿ ಪಕ್ಷವು, ರಾಷ್ಟ್ರೀಯ ಪಕ್ಷವಾಗುವ ಎಲ್ಲಾ ಷರತ್ತುಗಳನ್ನು ಪೂರೈಸಿದ್ದರೂ ರಾಷ್ಟ್ರೀಯ ಸ್ಥಾನಮಾನ ಪಡೆಯಲು ವಿಳಂಬವಾಗುತ್ತಿರುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು.

- Advertisement -

ಆಮ್ ಆದ್ಮಿ ಪಕ್ಷದ ಅರ್ಜಿಯನ್ನು ಪುರಸ್ಕರಿಸಿದ ಕರ್ನಾಟಕ ಹೈಕೋರ್ಟ್ ಎಪ್ರಿಲ್ 13 ರ ಒಳಗೆ ರಾಷ್ಟ್ರೀಯ ಪಕ್ಷದ ಮಾನ್ಯತೆಯನ್ನು ಆಮ್ ಆದ್ಮಿ ಪಕ್ಷಕ್ಕೆ ನೀಡಬೇಕೆಂದು ಚುನಾವಣಾ ಆಯೋಗಕ್ಕೆ ಆದೇಶಿಸಿದೆ.



Join Whatsapp