ಬೆಳ್ತಂಗಡಿ: ನೆರೆಮನೆಯ ಇಬ್ಬರು ಯುವತಿಯರು ಒಂದೇ ದಿನ ಅನುಮಾನಾಸ್ಪದ ಸಾವು

Prasthutha|

ಬೆಳ್ತಂಗಡಿ: ನೆರೆಮನೆಯ ಇಬ್ಬರು ಯುವತಿಯರು ಒಂದೇ ದಿನ ಮೃತಪಟ್ಟಿರುವ ಘಟನೆ ನೆಲ್ಯಾಡಿ ಸಮೀಪದ ಪಟ್ರಮೆ ಗ್ರಾಮದಲ್ಲಿ ನಡೆದಿದೆ.

- Advertisement -


ನೆಲ್ಯಾಡಿ ಸಮೀಪದ ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ (22) ಮತ್ತು ಪಕ್ಕದ ಮನೆಯ ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯ (21) ಮೃತಪಟ್ಟವರು.
ಇವರಿಬ್ಬರಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಒಂದೇ ದಿನ ಪ್ರಾಣ ಕಳೆದುಕೊಂಡಿದ್ದಾರೆ. ಈ ಎಲ್ಲ ವಿಚಾರಗಳು ಸಾವಿನ ಜತೆ ಹಲವು ಅನುಮಾನಗಳನ್ನು ಹುಟ್ಟಿಸಿವೆ.


ಏಪ್ರಿಲ್ 4ರಂದು ಸಂಜೆ ರಕ್ಷಿತಾ ಮತ್ತು ಲಾವಣ್ಯ ತಮ್ಮ ಮನೆಯಲ್ಲಿ ಹೊಟ್ಟೆ ನೋವಿನಿಂದ ನರಳಾಡಿದ್ದರು. ಇವರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಕ್ಷಿತಾ ಮತ್ತು ಲಾವಣ್ಯ ಸಾವನ್ನಪ್ಪಿದ್ದಾರೆ. ಸಾವಿನ ಬಗ್ಗೆ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.



Join Whatsapp