ಬೆಂಗಳೂರು: ನಟ ಸುದೀಪ್ ಅವರ ಚಲನಚಿತ್ರ, ಶೋ ಮತ್ತು ಭಾವಚಿತ್ರವಿರುವ ಜಾಹೀರಾತುಗಳ ಪ್ರಸಾರಕ್ಕೆ ತಡೆ ನೀಡಬೇಕು ಎಂದು ಜೆಡಿಎಸ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.
ಕನ್ನಡದ ನಟ ಕಿಚ್ಚ ಸುದೀಪ್ ಅವರು ಪ್ರಸ್ತುತ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಗುರುತಿಸಿಕೊಂಡಿದ್ದಾರೆ. ಆದ್ದರಿಂದ ಅವರ ಸಿನೆಮಾ, ಜಾಹೀರಾತು, ಪೋಸ್ಟರ್ ಮುಂತಾದುವುಗಳು ಬಿತ್ತರಿಸುವ ಮೂಲಕ ಮತದ ಮೇಲೆ ಪ್ರಭಾವ ಬೀರುತ್ತೆ ಎಂಬ ಹಿನ್ನೆಲೆಯಲ್ಲಿ ಚುನಾವಣೆ ಮುಗಿಯುವವರೆಗೆ ಸುದೀಪ್ ನಟನೆಯ ಯಾವುದೇ ಶೋ ಮತ್ತು ಅವರ ಭಾವಚಿತ್ರವಿರುವ ಜಾಹೀರಾತುಗಳ ಪ್ರಸಾರಕ್ಕೆ ತಡೆ ಹಿಡಿಯಬೇಕಾಗಿ ಜನತಾದಳ ಕಾನೂನು ವಿಭಾಗ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.