ಪುತ್ತೂರು: ಪುತ್ತೂರು ವಿಭಾಗದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕರೊಬ್ಬರು ರೈಲಿನ ಹಳಿಗೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಣಿಯೂರುನಲ್ಲಿ ನಡೆದಿದೆ.
ಕೆ.ಎಸ್.ಆರ್.ಟಿ.ಸಿ ಬಸ್ ನ ಡ್ರೈವರ್ & ಕಂಡಕ್ಟರ್ ಆಗಿರುವ ಕುಸುಮಾಧರ ಗೌಡ ಅಭೀರ (35) ಆತ್ಮಹತ್ಯೆ ಮಾಡಿಕೊಂಡವರು.
ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸುಮಾರು 8 ವರ್ಷಗಳಿಂದ ಕೆ.ಎಸ್.ಆರ್.ಟಿ.ಸಿ ಉದ್ಯೋಗಿಯಾಗಿದ್ದ ಕುಸುಮಾಧರ ಕಳೆದ ಒಂದು ವರ್ಷದ ಹಿಂದೆ ಮದುವೆಯಾಗಿದ್ದರು ಎನ್ನಲಾಗಿದೆ.