ಬಪ್ಪನಾಡು ಜಾತ್ರೆಯಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ: ಸಾರ್ವಜನಿಕ ವಲಯದಲ್ಲಿ ಆಕ್ರೋಶ

Prasthutha|

ಮಂಗಳೂರು: ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಈ ಬಾರಿಯೂ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಿಷೇಧ ಜಾರಿ ಮಾಡಲಾಗಿದೆ.

- Advertisement -


ಏಪ್ರಿಲ್ 5ರಂದು ಬಪ್ಪನಾಡು ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣ ನಡೆದು ಪೂಜಾ ಕೈಂಕರ್ಯಗಳು ಆರಂಭಗೊಂಡಿವೆ. ಈ ಮಧ್ಯೆ ಜಾತ್ರಾ ಮಹೋತ್ಸವದಲ್ಲಿ ವ್ಯಾಪಾರ ನಡೆಸುವ ಉದ್ದೇಶದಿಂದ ಮುಸ್ಲಿಂ ವ್ಯಾಪಾರಿಗಳು ದೇವಸ್ಥಾನಕ್ಕೆ ತೆರಳಿದ್ದಾರೆ. ಆದರೆ, ಇಲ್ಲಿ ವ್ಯಾಪಾರ ನಡೆಸಲು ಅವಕಾಶವಿಲ್ಲ ಎಂದು ನಿರಾಕರಿಸಿ ವ್ಯಾಪಾರಿಗಳನ್ನು ಹಿಂದೆ ಕಳುಹಿಸಲಾಗಿದೆ.


ದಕ್ಷಿಣ ಭಾರತದ ಸೌಹಾರ್ದದ ಕೊಂಡಿ ಎಣಿಸಿಕೊಂಡಿರುವ ಮತ್ತು ಮುಸಲ್ಮಾನರೇ ನಿರ್ಮಿಸಿರುವ ಬಪ್ಪನಾಡು ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರು ವ್ಯಾಪಾರ ನಡೆಸುವುದಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.



Join Whatsapp