ಬೆಂಗಳೂರು: ಮಾಜಿ ಸಂಸದ ಬಿಎನ್ ಚಂದ್ರಪ್ಪ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.
ಆರ್. ಧ್ರುವನಾರಯಣ್ ನಿಧನದಿಂದ ತೆರವಾಗಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಬಿಎನ್ ಚಂದ್ರಪ್ಪ ಅವರನ್ನು ನೇಮಕ ಮಾಡಿ ತಕ್ಷಣವೇ ಜಾರಿಗೆ ಬರುವಂತೆ ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಇಂದು(ಏಪ್ರಿಲ್ -09) ಆದೇಶ ಹೊರಡಿಸಿದ್ದಾರೆ.
1991 ರಿಂದ ಚಿಕ್ಕಮಗಳೂರು ಜಿಲ್ಲಾ ಪರಿಷತ್ ಸದಸ್ಯರಾಗುವ ಮೂಲಕ ಚಂದ್ರಪ್ಪ ಅವರು ತಮ್ಮ ರಾಜಕೀಯ ಜೀವನ ಆರಂಭಿಸಿದ್ದು, 2014ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು.