ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಅಖಿಲ ಭಾರತೀಯ ಮುಸ್ಲಿಂ ಲೀಗ್ ಸೆಕ್ಯುಲರ್ ಪಕ್ಷದ ಅಭ್ಯರ್ಥಿಯಾಗಿ ಪಕ್ಷದ ರಾಜ್ಯ ಕಾರ್ಯದರ್ಶಿ ಅಶ್ರಫ್ ಸಲ್ಮಾರ ಕಣಕ್ಕಿಳಿದಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಹಮೀದ್ ಡಾಬರ್ ಗುಲ್ಬರ್ಗ ಶಿಫಾರಸ್ಸಿನಂತೆ ಇಂದು ಅಶ್ರಫ್ ರವರ ಹೆಸರನ್ನು ಘೋಷಿಸಿದರು. ಶೀಘ್ರವೇ ಅಶ್ರಫ್ ಅವರು ಭಾರತೀಯ ಮುಸ್ಲಿಂ ಲೀಗ್ ಸೆಕ್ಯುಲರ್ ಪಕ್ಷದಿಂದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲ್ಲಿದ್ದಾರೆ.