ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಬಿಜೆಪಿ ಸೇರ್ಪಡೆ

Prasthutha|

►ಎದೆಗೆ ಚೂರಿ ಹಾಕಿದಂತಾಗಿದೆ ಎಂದ ಕಾಗೋಡು ತಿಮ್ಮಪ್ಪ

- Advertisement -

ಸಾಗರ: ಕಾಂಗ್ರೆಸ್ ನ ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರ ಪುತ್ರಿ ರಾಜನಂದಿನಿ ಬುಧವಾರ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಡಾ. ರಾಜನಂದಿನಿಯವರು KPCC ಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ನವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

- Advertisement -

ಮಗಳ ಬಿಜೆಪಿ ಸೇರ್ಪಡೆಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕಾಗೋಡು ತಿಮ್ಮಪ್ಪ, ಮಗಳು ಈ ರೀತಿ ಮಾಡುತ್ತಾಳೆ ಎಂದು ನಾನು ಭಾವಿಸಿರಲಿಲ್ಲ. ಅವಳ ಬಿಜೆಪಿ ಸೇರ್ಪಡೆ ನನ್ನ ಎದೆಗೆ ಚೂರಿ ಹಾಕಿದಂತೆ ಆಗಿದೆ. ನಾವೆಲ್ಲ ರಾಜಕೀಯದಲ್ಲಿ ಬದ್ಧತೆಯಿಂದ ಬೆಳೆದವರು. ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ. ಮಗಳ ಬಿಜೆಪಿ ಸೇರ್ಪಡೆ ಹಿಂದೆ ಹಾಲಪ್ಪನವರ ಕೈವಾಡವಿರಬಹುದು. ನೋಡೋಣ ಮಗಳಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.



Join Whatsapp