ನಾಗಪುರದ ವಂಶದವರು ಇತರರನ್ನು ಹೊಂಡಕ್ಕೆ ತಳ್ಳಿ ಆಳ ನೋಡುವ ಬದಲು ತಾವೇ ಮುಂದೆ ನಿಂತು ಸಾಮರ್ಥ್ಯ ತೋರಲಿ: ಕಾಂಗ್ರೆಸ್ ಸವಾಲು

Prasthutha|

ಬೆಂಗಳೂರು: ಕನಕಪುರ ಮತ್ತು ವರುಣ ಕ್ಷೇತ್ರದಲ್ಲಿ ಬಿ. ಎಲ್ ಸಂತೋಷ್ ಮತ್ತು ಪ್ರಹ್ಲಾದ್ ಜೋಷಿ ಅವರನ್ನು ಸ್ಪರ್ಧೆಗೆ ಆಹ್ವಾನಿಸುತ್ತೇವೆ. ಪಂಥಾಹ್ವಾನ ಸ್ವೀಕರಿಸುವರೇ? ಎಂದು ಕಾಂಗ್ರೆಸ್ ಸವಾಲು ಹಾಕಿದೆ.

- Advertisement -


ನಾಗಪುರದ ವಂಶದವರು ಇತರರನ್ನು ಹೊಂಡಕ್ಕೆ ತಳ್ಳಿ ಆಳ ನೋಡುವ ಬದಲು ತಾವೇ ಮುಂದೆ ನಿಂತು ಸಾಮರ್ಥ್ಯ ತೋರಲಿ. ಬಿ.ಎಲ್ ಸಂತೋಷ್ ತೆರೆಮರೆಯಿಂದ ಹೊರಬಂದು ಚುನಾವಣೆಗೆ ಸ್ಪರ್ಧಿಸಿ ಸಾಮರ್ಥ್ಯ ನಿರೂಪಿಸಲಿ ಎಂದು ಕಾಂಗ್ರೆಸ್ ಹೇಳಿದೆ.


ಚಿತ್ತಾಪುರ ಕ್ಷೇತ್ರದಲ್ಲಿ ಬಿಜೆಪಿ ಸರ್ಕಾರದಲ್ಲೇ ಗಡಿಪಾರು ಆಗಿದ್ದ, ಅನ್ನಭಾಗ್ಯದ ಅಕ್ಕಿ ಕಳ್ಳಸಾಗಣೆಯ ಆರೋಪಿ ರೌಡಿ ಶೀಟರ್ಗೆ ಟಿಕೆಟ್ ಕೊಡುವ ಮೂಲಕ #BJPRowdyMorcha ಕ್ಕೂ ಮನ್ನಣೆ ನೀಡಿದೆ! ಬಿಜೆಪಿಯ ಟಿಕೆಟ್ಗೆ “ಗಡಿಪಾರು” ಆಗಿರುವುದೇ ಬಹುಮುಖ್ಯ ಮಾನದಂಡ ಎಂಬುದನ್ನು ದಿಲ್ಲಿಯಿಂದ ಇಲ್ಲಿಯವರೆಗೆ ನಿರೂಪಿಸಿದೆ ಎಂದು ಮತ್ತೊಂದು ಟ್ವೀಟ್ ನಲ್ಲಿ ಕಾಂಗ್ರೆಸ್ ಬಿಜೆಪಿ ವಿರುದ್ಧ ಹರಿಹಾಯ್ದಿದೆ.



Join Whatsapp