ಚಿಕ್ಕಮಗಳೂರು: ಮಹಿಳೆಯೊಬ್ಬರು ಮೂಡಿಗೆರೆ ಪೊಲೀಸ್ ಠಾಣೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಹಳೆ ಮೂಡಿಗೆರೆ ಗ್ರಾಮದ ಶಿಲ್ಪ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯಾಗಿದ್ದು, ಆಕೆಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.
ಹಳೆ ಮೂಡಿಗೆರೆ ಗ್ರಾಮದ ಶಿಲ್ಪ ಮತ್ತು ಆಕೆಯ ಅಕ್ಕನ ನಡುವೆ 2022ರಲ್ಲಿ ಗಲಾಟೆಯಾಗಿತ್ತು, ಈ ವಿಷಯಕ್ಕೆ ಇಬ್ಬರು ಅಕ್ಕ ತಂಗಿಯರು ದೂರು ನೀಡಲು ಮೂಡಿಗೆರೆ ಠಾಣೆಗೆ ಹೋಗಿದ್ದರು. ಈ ವೇಳೆ ಅಲ್ಲಿನ ಸುಜಾತಾ ಎಂಬ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಶಿಲ್ಪಾ ಹಲ್ಲೆ ಮಾಡಿದ್ದರಂತೆ.
ಈ ಕಾರಣಕ್ಕೆ ಶಿಲ್ಪ ವಿರುದ್ದ ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ಕಳೆದ ಒಂದು ವರ್ಷದಿಂದ ಶಿಲ್ಪ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನಲೆ ಕೋರ್ಟ್ ಆಕೆಯ ವಿರುದ್ಧ ಸಮನ್ಸ್ ಜಾರಿ ಮಾಡಿತ್ತು. ಇದರಿಂದ ಇದೀಗ ಮಹಿಳೆ ಕೋರ್ಟ್ ಸಮನ್ಸ್ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.