ವಿಜಯಪುರ: ಹೊಲದಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಮಲಗಲದಿನ್ನಿ ಗ್ರಾಮದಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಮಲಗಲದಿನ್ನಿ ಗ್ರಾಮ ವ್ಯಾಪ್ತಿಯ ಬಸವರಾಜ ಮಲ್ಲೇಶಪ್ಪ ಬಿರಾದಾರ ಎಂದು ಗುರುತಿಸಲಾಗಿದೆ.
ಆರೋಪಿ ತನ್ನ ಹೊಲದಲ್ಲಿ ಬೆಳೆಗಳ ಮಧ್ಯೆ ಕಾನೂನು ಬಾಹಿರವಾಗಿ ಬೆಳೆಸಿದ್ದ ಸುಮಾರು 1.80 ಲಕ್ಷ ಮೌಲ್ಯದ 36.820 ಕೆಜಿಯಷ್ಟು ಹಸಿ ಗಾಂಜಾ ಬೆಳೆಯನ್ನು ಮುದ್ದೇಬಿಹಾಳ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಗಾಂಜಾ ಗಿಡ ಬೆಳೆದಿರುವ ಬಗ್ಗೆ ಒದಗಿದ ಖಚಿತ ಮಾಹಿತಿ ಮೇರೆಗೆ ಮುದ್ದೇಬಿಹಾಳ ಸಿಪಿಐ ಮಲ್ಲಿಕಾರ್ಜುನ ತುಳಸೀಗೇರಿ ನೇತೃತ್ವದಲ್ಲಿ ಪಿಎಸೈ ಆರೀಫ ಮುಷಾಪುರಿ ಮತ್ತು ಪೊಲೀಸ್ ಸಿಬ್ಬಂದಿ ದಾಳಿ ನಡೆಸಿದ್ದಾರೆ.
ಪೊಲೀಸ್ ಸಿಬ್ಬಂದಿಗಳಾದ ಗೋವಿಂದ ಗೆಣ್ಣೂರ, ವಿರೇಶ ಹಾಲಗಂಗಾಧರಮಠ, ಮಲ್ಲನಗೌಡ ಬೋಳರೆಡ್ಡಿ, ಚಿದಾನಂದ್ ಸುರುಗಿಹಳ್ಳಿ, ಶ್ರೀಕಾಂತ ಬಿರಾದಾರ, ನರಸಿಂಹ ಚೌಧರಿ, ಶಿವರಾಜ ನಾಗರೆಡ್ಡಿ, ಮಂಜುನಾಥ ಬುಳ್ಳ, ಮಾಳಪ್ಪ ನಾಲತವಾಡ, ರವಿ ಲಮಾಣಿ ಕಾರ್ಯಾಚರಣೆಯಲ್ಲಿ ಭಾಗವಹಿದ್ದರು.