ಮಂಗಳೂರು: ದ.ಕ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಿಗೆ ಎರಡನೇ ದಿನವಾದ ಏ.15ರ ಶನಿವಾರ ಮಂಗಳೂರು ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಮೂವರು ಅಭ್ಯರ್ಥಿಗಳಿಂದ ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ತಿಳಿಸಿದ್ದಾರೆ.
204- ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಯು ಪಕ್ಷದ ಅಭ್ಯರ್ಥಿಯಾಗಿ ಕೃಷ್ಣ ಪೂಜಾರಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ದೀಪಕ್ ರಾಜೇಶ್ 2 ನಾಮಪತ್ರಗಳನ್ನು ಹಾಗೂ 205 – ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ರಾಜೇಶ್ ನಾಯ್ಕ್ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಉಳಿದಂತೆ 200 -ಬೆಳ್ತಂಗಡಿ, 201-ಮೂಡಬಿದ್ರೆ, 202- ಮಂಗಳೂರು ಉತ್ತರ, 203-ಮಂಗಳೂರು ದಕ್ಷಿಣ, 206 ಪುತ್ತೂರು ಹಾಗೂ 207- ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.
ಇದುವರೆಗೆ ಒಟ್ಟಾರೆ 5 ಅಭ್ಯರ್ಥಿಗಳಿಂದ 6 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದೆ.