ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದ ಬೆನ್ನಲ್ಲೇ ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಅಂಬರೀಶ್, ವರಿಷ್ಠರು ಸೂಚಿಸಿದರೆ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ. ಮಂಡ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ವದಂತಿ ಇದೆ. ಪಕ್ಷ ಸೂಚನೆ ನೀಡಿದರೆ ನನ್ನ ಸ್ಪರ್ಧೆ ಇರಲಿದೆ. ಈವರೆಗೆ ಪಕ್ಷ ನನಗೆ ಯಾವುದೇ ಸೂಚನೆಯನ್ನು ನೀಡಿಲ್ಲ. ಮಂಡ್ಯ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಮರ್ಥರಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಮಂಡ್ಯ ಜಿಲ್ಲೆಯ ಜನರು ಬದಲಾವಣೆ ಬಯಸುತ್ತಿದ್ದಾರೆ. ಹೀಗಾಗಿ ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಅಚ್ಚರಿ ಫಲಿತಾಂಶ ಬರುತ್ತದೆ. ಮದ್ದೂರಿನಲ್ಲಿ ದಿವಂಗತ ಅಂಬರೀಶ್ ಅಭಿಮಾನಿಗಳು ಹೆಚ್ಚು ಇದ್ದಾರೆ. ಅಂಬರೀಶ್ ಅಭಿಮಾನಿಗಳಿರುವುದರಿಂದ ಬಿಜೆಪಿಗೆ ಪ್ಲಸ್ ಆಗುತ್ತೆ ಎಂದರು.