ಟಿಕೆಟ್ ಮಿಸ್ ಆಗಿದ್ದಕ್ಕೆ ರಾಮದಾಸ್ ಗರಂ: ಇಂದು ನಿರ್ಧಾರ ಪ್ರಕಟಿಸುತ್ತೇನೆಂದ ಬಿಜೆಪಿ ನಾಯಕ

Prasthutha|

ಮೈಸೂರು: ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಹಾಲಿ ಶಾಸಕ ಎಸ್.ಎ ರಾಮದಾಸ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು. ಶ್ರೀವತ್ಸಗೆ ಪಕ್ಷ ಟಿಕೆಟ್ ನೀಡಿದೆ. ಟಿಕೆಟ್ ಕೈ ತಪ್ಪಿರುವುದಕ್ಕೆ ರಾಮದಾಸ್ ಅಸಮಾಧಾನ ವ್ಯಕ್ತಪಡಿಸಿದ್ದು,ಇಂದು ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 30 ವರ್ಷದಿಂದ ಇದ್ದ ತಾಯಿ ಮನೆಯಿಂದ ಓಡಿಸಿದ್ದಾರೆ. ಈಗ ಆ ಮನೆಯಲ್ಲಿ ಇರಬೇಕಾ ಬೇಡವಾ ಎಂಬ ಬಗ್ಗೆ ಯೋಚಿಸಬೇಕಾಗಿದೆ ಎಂದು ಹೇಳಿದ್ದಾರೆ. ಆ ಮೂಲಕ ಬಿಜೆಪಿಗೆ ಮೈಸೂರಿನಲ್ಲೂ ಬಂಡಾಯದ ಬಿಸಿ ಮುಟ್ಟಿಸುವ ಸುಳಿವು ನೀಡಿದ್ದಾರೆ.


ಟಿಕೆಟ್ ಘೋಷಣೆ ಬಳಿಕ ಕೆಆರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಹಾಗೂ ಸಂಸದ ಪ್ರತಾಪ್ ಸಿಂಹ ರಾಮದಾಸ್ ಅವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ತೆರಳಿದ್ದರು. ಈ ವೇಳೆ ರಾಮದಾಸ್ ತಾವು ಯಾರೊಂದಿಗೂ ಮಾತನಾಡುವುದಿಲ್ಲ ಎಂದು ಹೇಳಿ ಅವರನ್ನು ಹಾಗೇ ಕಳುಹಿಸಿದ್ದಾರೆ.



Join Whatsapp