ಒಂದು ಪಕ್ಷದ ಪರ ಪ್ರಚಾರ: ಕರ್ತವ್ಯ ಲೋಪ: ಪಿಡಿಒ ಅಮಾನತು

Prasthutha|

ಮಂಗಳೂರು: ಹರೇಕಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯಶವಂತ ಬೆಳ್ಚಡ ಸರ್ಕಾರಿ ನೌಕರ. ಅವರು ಒಂದು ಪಕ್ಷದ ಪರ ರಾಜಕೀಯ ಪ್ರಚಾರ ಮಾಡುತ್ತಿದ್ದಾರೆ ಎಂಬ ದೂರಿನನ್ವಯ ಸತ್ಯಾಸತ್ಯತೆಯನ್ನು ಪರಿಶೀಲಿಸಿ, ವಿಚಾರಣಾ ವರದಿಯ ನಂತರ ಆ ಸರ್ಕಾರಿ ನೌಕರನನ್ನು ಕರ್ತವ್ಯ ಲೋಪದ ಆರೋಪದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತಿನಲ್ಲಿರಿಸಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶಿಸಿದ್ದಾರೆ.

- Advertisement -

ಅಮಾನತ್ತಾದ ಅವಧಿಯಲ್ಲಿ ನೌಕರರಿಗೆ ಕರ್ನಾಟಕ ಸರ್ಕಾರಿ ಸೇವಾ ನಿಯಮಾವಳಿ ನಿಯಮ 98ರ ನಿಯಮ ಲಭ್ಯವಾಗುವ ಜೀವನಾಧಾರ ಭತ್ಯೆಯನ್ನು ಪಾವತಿಸಲು ಆದೇಶಿಸಲಾಗಿದೆ.

ಅಲ್ಲದೆ ಅಮಾನತ್ತಿನಲ್ಲಿರುವ ಅವಧಿಯಲ್ಲಿ ನೌಕರ ಕರ್ನಾಟಕ ಸರ್ಕಾರಿ ಸೇವಾ ನಿಯಮಾವಳಿ ನಿಯಮ 104ರ ಅನ್ವಯ ಸಂಬಂಧಪಟ್ಟ ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

- Advertisement -

ಚುನಾವಣಾ ಕಾರ್ಯಕ್ಕೆ 18ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

ಮಂಗಳೂರು:-
ಪ್ರಚಾರ ಸೇರಿದಂತೆ ಇನ್ನಿತರೆ ಚುನಾವಣಾ ಕಾರ್ಯಗಳಿಗೆ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ.

ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ವಿಶ್ವಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ 1992ರ ಡಿಸೆಂಬರ್ 11ರಂದು ಒಪ್ಪಿಗೆ ನೀಡಿದ್ದು, ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಹಾಗೂ ರಕ್ಷಣೆ ಕಾಯ್ದೆ) 2015ರ ಅನ್ವಯ 18 ವರ್ಷದೊಳಗಿನ ಎಲ್ಲರೂ ಮಕ್ಕಳು ಎಂದು ಪರಿಗಣಿಸಲಾಗಿದೆ. ಅಲ್ಲವೇ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸದಂತೆ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಕಾಯ್ದೆಯನ್ನು ಉಲ್ಲಂಘಿಸಿ 18 ವರ್ಷದೊಳಗಿನ ಮಕ್ಕಳನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಂಡಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986ರ ಅನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Join Whatsapp