ಲಂಡನ್: ಬ್ರಿಟಿಷ್ ಉಪ ಪ್ರಧಾನಿ ಡೊಮಿನಿಕ್ ರಾಬಾ ರಾಜೀನಾಮೆ ನೀಡಿದ್ದಾರೆ. ಇಬ್ಬರು ಹಿರಿಯ ಅಧಿಕಾರಿಗಳು ಡೊಮಿನಿಕ್ ವಿರುದ್ಧ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದರು.
ಉಪ ಪ್ರಧಾನಿ ಡೊಮಿನಿಕ್ ಹಿರಿಯ ಅಧಿಕಾರಿಗಳೊಂದಿಗೆ ತುಂಬಾ ಕೆಟ್ಟದಾಗಿ ವರ್ತಿಸುತ್ತಿದ್ದು, ಕೆಲವರು ಅಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಡೊಮಿನಿಕ್ ರಾಬ್ ರಿಷಿ ಸುನಕ್ ಸರ್ಕಾರದಲ್ಲಿ ರಾಜೀನಾಮೆ ನೀಡಿದ ಮೂರನೇ ಸಚಿವರಾಗಿದ್ದಾರೆ.