ಚಿತ್ರನಟ ಸಂಪತ್​ ಜಯರಾಮ್​ ಆತ್ಮಹತ್ಯೆ

Prasthutha|

- Advertisement -

ಬೆಂಗಳೂರು: ನಟನೆಯ ಅವಕಾಶಗಳ ಕೊರತೆಯಿಂದ ನೊಂದ ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ಅಭಿನಯಿಸಿದ್ದ ಕಿರುತೆರೆ ಹಾಗೂ ಹಿರಿತೆರೆಯ ಯುವ ನಟ ಸಂಪತ್ ಜಯರಾಮ್ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೆಲಮಂಗಲದ ಅರಿಶಿನಕುಂಟೆಯಲ್ಲಿರುವ ನಿವಾಸದಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಸಂಪತ್ ಜಯರಾಮ್ ಅವರಿಗೆ 35 ವರ್ಷ ವಯಸ್ಸಾಗಿತ್ತು.

- Advertisement -

​ಮೃತ ಸಂಪತ್ ಜಯರಾಮ್ ಅಗ್ನಿಸಾಕ್ಷಿ ಧಾರಾವಾಹಿ ಸೇರಿದಂತೆ ಕೆಲ ಸಿನಿಮಾಗಳಲ್ಲಿ ನಟಿಸಿದ್ದರು. ಒಂದು ವರ್ಷದ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಇತ್ತೀಚೆಗೆ ಅವರಿಗೆ ಯಾವುದೇ ನಟನೆಯ ಅವಕಾಶಗಳು ಬಂದಿರಲಿಲ್ಲ, ಇದರಿಂದ ಮನನೊಂದಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೆಲಮಂಗಲದ ಆಸ್ಪತ್ರೆಯಿಂದ ಎನ್​ ಆರ್​ ಪುರಕ್ಕೆ ಅವರ ಮೃತದೇಹ ರವಾನಿಸಲಾಗಿದೆ.

ಸಂಪತ್​ ಜಯರಾಮ್​ ನಿಧನಕ್ಕೆ ನಟ ರಾಜೇಶ್​ ಧ್ರುವ ಅವರು ಸಂತಾಪ ಸೂಚಿಸಿದ್ದಾರೆ. ಅಗಲಿದ ಗೆಳೆಯನನ್ನು ನೆನದು ಅವರು ಕಂಬನಿ ಮಿಡಿದಿದ್ದಾರೆ. ‘ನಿನ್ನ ಅಗಲಿಕೆ ತಡ್ಕೊಳೋ ಶಕ್ತಿ ನಮಗಿಲ್ಲ ಮಗ. ಅದೆಷ್ಟೋ ಸಿನಿಮಾ ಮಾಡೋದಿದೆ. ಅದೆಷ್ಟೋ ಜಗಳ ಬಾಕಿ ಇದೆ. ಕಂಡ ಕನಸು ನನಸು ಮಾಡ್ಕೋಳೋಕೆ ಇನ್ನೂ ಸಾಕಷ್ಟು ಸಮಯ ಇದೆ. ಇನ್ನೂ ನಿನ್ನ ದೊಡ್ಡ ದೊಡ್ಡ ಸ್ಟೇಜ್​ನಲ್ಲಿ ನೋಡೋದು ಇದೆ ಕಣೋ. ವಾಪಾಸ್ ಬಾರೋ ಪ್ಲೀಸ್’ ಎಂದು ಅವರು ಪೋಸ್ಟ್​ ಮಾಡಿದ್ದಾರೆ.

ಆತ್ಮಹತ್ಯೆಯ ಸಂಬಂಧ ನೆಲಮಂಗಲ ಟೌನ್ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.



Join Whatsapp