ಕುನೋ: ಮಧ್ಯಪ್ರದೇಶದಲ್ಲಿರುವ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಮೃತಪಟ್ಟಿದೆ.
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ‘ಸಾಶಾ’ ಹೆಸರಿನ ಚೀತಾ ಕೆಲತಿಂಗಳ ಹಿಂದೆ ಮೃತಪಟ್ಟಿತ್ತು. ಇದೀಗ 6 ವರ್ಷದ ಗಂಡು ಚೀತಾ ‘ಉದಯ್’ ಮೃತಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಈ ಚೀತಾಗಳನ್ನು ಭಾರತಕ್ಕೆ ಕರೆತರಲಾಗಿತ್ತು.
ಏಪ್ರಿಲ್ 23ರ ಭಾನುವಾರ ಬೆಳಗ್ಗೆಯಿಂದ ಅಸ್ವಸ್ಥಗೊಂಡಿದ್ದ ಚೀತಾವನ್ನು ವನ್ಯಜೀವಿ ವೈದ್ಯರು ಚಿಕಿತ್ಸೆ ಮತ್ತು ಮೇಲ್ವಿಚಾರಣೆಗಾಗಿ ಪ್ರತ್ಯೇಕ ವಾರ್ಡ್ನಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಂಜೆ 4 ಗಂಟೆ ಸಮಯದಲ್ಲಿ ಚೀತಾ ಮೃತಪಟ್ಟಿದೆ. ಉದಯ್ ಚೀತಾ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆ.ಎಸ್. ಚೌಹಾಣ್ ಮಾಹಿತಿ ನೀಡಿದ್ದಾರೆ.