ಪ್ರಿಯಕರನ ಬ್ಲ್ಯಾಕ್ ಮೇಲ್: ಮಹಿಳೆ ಲೈವ್ ಸುಸೈಡ್

Prasthutha|

ವಿಜಯಪುರ: ವಿವಾಹಿತ ಮಹಿಳೆಯೊಬ್ಬರು ಮೊಬೈಲ್ ವಿಡಿಯೋ ಆನ್ ಮಾಡಿ ನೇಣು ಬಿಗಿದು ಆತ್ಮಹತ್ಯೆ (ಲೈವ್ ಸುಸೈಡ್) ಮಾಡಿಕೊಂಡಿರುವ ಘಟನೆ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ.

- Advertisement -


ಉಪ್ಪಲದಿನ್ನಿಯ ಸುಹಾನ್ ಸೋನಾರ್ (21) ಆತ್ಮಹತ್ಯೆಗೆ ಶರಣಾದ ವಿವಾಹಿತೆ ಮಹಿಳೆ. ಈಕೆ ನೇಣಿಗೆ ಶರಣಾಗುವ ಮುನ್ನ ಪ್ರಿಯಕರನ ಬ್ಲ್ಯಾಕ್ ಮೇಲ್ ಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆ.
ನನ್ನೊಂದಿಗಿರುವ ಫೋಟೋ ನಿನ್ನ ಪತಿಗೆ ತೋರಿಸುತ್ತೇನೆ ಎಂದು ಪ್ರಿಯಕರ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ಮರ್ಯಾದೆಗೆ ಹೆದರಿ ಸುಹಾನಾ ಲೈವ್ ವಿಡಿಯೋ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.


ಕಳೆದ ಏಪ್ರಿಲ್ 15ರಂದು ವಿವಾಹಿತೆ ಸುಹಾನಾ ಆತ್ಮಹತ್ಯೆಗೆ ಕಾರಣ ತಿಳಿಸಿ, ಮೊಬೈಲ್ ವಿಡಿಯೋ ಆನ್ ಮಾಡಿ ನೇಣಿಗೆ ಶರಣಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಉಪ್ಪಲದಿನ್ನಿ ಗ್ರಾಮದ ಅಲ್ತಾಫ್ ಸುಲೆಮಾನ್ ಒಂದು ವರ್ಷದ ಹಿಂದೆ ಸುಹಾನಾ ಜೊತೆ ಸಲುಗೆ ಬೆಳೆಸಿ ಪ್ರೀತಿಸುತ್ತಿದ್ದ. ಈ ವಿಷಯ ಸುಹಾನಾ ಪೋಷಕರಿಗೆ ಗೊತ್ತಾಗಿ ಹಿರಿಯರ ಸಮ್ಮುಖದಲ್ಲಿ ಅಲ್ತಾಫ್’ಗೆ ತಾಕೀತು ಮಾಡಿದ್ದರು. ಬಳಿಕ ಸುಹಾನಾ ಹೊಕ್ಕುಂಡಿ ಗ್ರಾಮದ ಷರೀಫ್ ಸೋನಾರ್ ಜೊತೆಗೆ ಇತ್ತೀಚೆಗೆ ಮದುವೆ ಮಾಡಿ ಕೊಟ್ಟಿದ್ದರು.

- Advertisement -


ಮೂವರಿಂದ ಸುಹಾನಾಳಿಗೆ ಕಿರುಕುಳ
ಇನ್ನು ಗ್ರಾಮದ ಯುನೀಸ್ ಪಾರ್ಥನಳ್ಳಿ ಹಾಗೂ ದಸ್ತಗಿರಸಾಬ್ ಮುಳವಾಡ ಎಂಬುವವರ ಜೊತೆಗೆ ವಿವಾಹಿತೆ ತಂದೆ ಅಸ್ಲಂ ಮುಲ್ಲಾ ದ್ವೇಷ ಹೊಂದಿದ್ದ. ದಸ್ತಗಿರಸಾಬ್ ಮುಳವಾಡ ಮಗಳ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದಿದ್ದಕ್ಕೆ ಅಸ್ಲಂ ಮುಲ್ಲಾ ಕಾರಣವೆಂದು ಸಿಟ್ಟು ಮಾಡಿಕೊಂಡಿದ್ದರು. ಇದೇ ಕಾರಣಕ್ಕೆ ಮೂವರು ಸೇರಿ ಸುಹಾನಾ ಬೆನ್ನು ಹತ್ತಿ ಕಿರುಕುಳ ಕೊಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗಂಡನನ್ನು ಬಿಟ್ಟು ಬಾ, ಇಲ್ಲವಾದರೆ ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಸುಹಾನಾಳಿಗೆ ಅಲ್ತಾಫ್ ಸುಲೆ ಮಾನ್ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತಿದ್ದ ಸುಹಾನಾ, ಮೂವರ ಹೆಸರು ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಳೆ. ಈ ಕುರಿತು ಸುಹಾನಾ ತಂದೆ ಅಸ್ಲಂ ಮುಲ್ಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.



Join Whatsapp